ಚಿಕ್ಕಮಗಳೂರು: ಹಾಡಹಗಲೇ ಗುಂಡಿನ ದಾಳಿ ನಡೆಸಿ ಬೈಕ್ನಲ್ಲಿ ತೆರಳುತ್ತಿದ್ದ ಸವಾರರಿಬ್ಬರ ಹತ್ಯೆ ಮಾಡಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರುಳ್ಳಿಬಿದರೆ ಗ್ರಾಮದ ಬಳಿ ನಡೆದಿದೆ.
ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಳ್ಳಿಬೈಲು ಗ್ರಾಮದ ನಿವಾಸಿಗಳಾದ ಪ್ರಕಾಶ್ (28) ಪ್ರವೀಣ್ (30) ಸ್ಥಳದಲ್ಲಿ ಸಾವನಪ್ಪಿದ್ದು, ರಮೇಶ್ ಎಂಬಾತದಿಂದ ಕೋವಿಯಿಂದ ಗುಂಡುಹಾರಿಸಿ ಹತ್ಯೆ ನಡೆದಿದೆ.
ಆರೋಪಿಯನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ. ಮೃತ ದೇಹಗಳನ್ನು ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.