ಹಿರಿಯ ನಟ ನಿರ್ದೇಶಕ ಸತೀಶ್ ಕೌಶಿಕ್ ನಿಧನ

ಸತೀಶ್‌
Advertisement

ಖ್ಯಾತ ನಟ ಹಾಗೂ ನಿರ್ದೇಶಕ ಸತೀಶ್ ಕೌಶಿಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ . ಸತೀಶ್‌ಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ದೆಹಲಿಯ ಪೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸತೀಶ್ ನಿಧನ ಹೊಂದಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ಯಾರಿ ರಸ್ತೆಯ ಮುಂಬೈನ ವರ್ಸೋವಾದಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಸತೀಶ್, ನಟನೆಯ ಜೊತೆಗೆ ನಿರ್ದೇಶನವನ್ನೂ ಮಾಡಿದ್ದರು. ಅಲ್ಲದೇ, ಖ್ಯಾತ ನಟರ ಜೊತೆ ತೆರೆಹಂಚಿಕೊಂಡಿದ್ದು ವಿಶೇಷ. ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಹಲವರು ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ.