ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನ ಹಾರಾಟ ಆರಂಭಿಸಲಿದೆ. ಇದೇ ಫೆಬ್ರುವರಿ 4ರಿಂದ ಹುಬ್ಬಳ್ಳಿಯಿಂದ ಪುಣೆಗೆ ವಿಮಾನ ಸೇವೆ ಪ್ರಾರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹುಬ್ಬಳ್ಳಿ-ಧಾರವಾಡಕ್ಕೆ ಮತ್ತೊಂದು ಸಂತಸದ ಸುದ್ದಿ. ಅಧಿಕಾರಿಗಳೊಂದಿಗೆ ಮಾತನಾಡಿದ ನಂತರ ಹುಬ್ಬಳ್ಳಿಯಿಂದ ಪುಣೆಗೆ ವಿಮಾನ ಸೇವೆ ಪ್ರಾರಂಭವಾಗಲಿದೆ ಎಂದು ಅವರು ಖಚಿತಪಡಿಸಿರುವುದಾಗಿ ಅವರು ಬರೆದುಕೊಂಡಿದ್ದಾರೆ.