ಕಾರವಾರ: ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಕಳೆದ 6 ವರ್ಷಗಳಿಂದ ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕಿಯಾಗಿ ಕಂಪ್ಯೂಟರ್ ಸೈನ್ಸ್ ವಿಷಯ ಬೋಧಿಸುತ್ತಿದ್ದ ನಗರದ ಅನುಷಾ ಶೆಟ್ಟಿ(27) ಹೃದಯಾಘಾತದಿಂದ ಮೃತಪಟ್ಟ ಉಪನ್ಯಾಸಕಿ. ಸೋಮವಾರ ಬೆಳಿಗ್ಗೆ ತಮ್ಮ ಮನೆಯಲ್ಲಿ ಕುಸಿದು ಬಿದ್ದ ಇವರನ್ನು ತಕ್ಷಣ ಕ್ರಿಮ್ಸ್‌ಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಕ್ರಿಮ್ಸ್‌ಗೆ ಧಾವಿಸಿ ಕಂಬನಿ ಮಿಡಿದಿದ್ದಾರೆ.