ಹೊಸ ಮೀಸಲಾತಿ: ಸರ್ಕಾರಕ್ಕೆ ಸುಪ್ರೀಂ ನೋಟಿಸ್‌

ವಿಧಾನಸೌಧ
Advertisement

ನವದೆಹಲಿ: ಹೊಸ ಮೀಸಲಾತಿ ಅನ್ವಯ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶಾತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.
ಮುಸ್ಲಿಂ ಸಮುದಾಯದ 4% ಮೀಸಲಾತಿ ರದ್ದು ಮಾಡಿದ ಸರ್ಕಾರದ ಆದೇಶ ಪ್ರಶ್ನಿಸಿ ಗುಲಾಮ್ ರಸೂಲ್ ಎನ್ನುವವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾ.ಕೆ.ಎಂ. ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠ ಏಪ್ರಿಲ್‌ 18ರ ವರೆಗೆ ಹೊಸ ಮೀಸಲಾತಿ ಅನ್ವಯ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶಾತಿ ನೀಡದಂತೆ ರಾಜ್ಯ ಸರಕಾರಕ್ಕೆ ನೋಟಿಸ್‌ ನೀಡಿದೆ.
ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮುಸ್ಲಿಮರಿಗೆ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಲಾಗಿದೆಯೇ ಹೊರತು ಯಾವುದೇ ಪ್ರಯೋಗಿಕ ದತ್ತಾಂಶ ಇಲ್ಲ ಎಂದು ವಾದಿಸಿದರು. ಅಫಿಡವಿಟ್ ಸಲ್ಲಿಕೆಗೆ ತುಷಾರ್‌ ಮೆಹ್ತಾ ಮೂರು ದಿನಗಳ ಸಮಯ ಕೇಳಿದ ಹಿನ್ನಲೆಯಲ್ಲಿ ಕೋರ್ಟ್ ಮುಂದಿನ ವಿಚಾರಣೆಯನ್ನು ಏ. 18ಕ್ಕೆ ಮುಂದೂಡಿದೆ.