ʻಉದ್ದೇಶಪೂರ್ವಕವಾಗಿಯೇ ನೆಹರು ಭಾವಚಿತ್ರ ಕೈಬಿಟ್ಟಿದ್ದೇವೆʼ

ಎನ್. ರವಿಕುಮಾರ್
Advertisement

ಸರ್ಕಾರದ ಜಾಹೀರಾತಿನಲ್ಲಿ ಉದ್ದೇಶಪೂರ್ವಕವಾಗಿಯೇ ನೆಹರು ಭಾವಚಿತ್ರ ಕೈಬಿಟ್ಟಿದ್ದೇವೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧಿಯವರ ಮಾತನ್ನೇ ನೆಹರು ಕೇಳಲಿಲ್ಲ. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ವಿಸರ್ಜಿಸಿ ಅಂತ ಗಾಂಧೀಜಿ ಹೇಳಿದ್ದರು. ಆದರೆ, ನೆಹರು ಕಾಂಗ್ರೆಸ್ ವಿಸರ್ಜಿಸಲಿಲ್ಲ. ಅಲ್ಲದೇ ದೇಶ ವಿಭಜನೆಗೆ ಕಾರಣವಾಗಿರುವ ನೆಹರುರವರ ಫೋಟೋವನ್ನು ನಾವು ಹಾಕಲ್ಲ, ನಾವು ಉದ್ದೇಶಪೂರ್ವಕವಾಗಿಯೇ ನೆಹರೂ ಭಾವಚಿತ್ರ ಕೈ ಬಿಟ್ಟಿದ್ದೇವೆ ಎಂದು ರಾಜ್ಯ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಎನ್. ರವಿಕುಮಾರ್