ಬೆಂಗಳೂರು: ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ರೂಪಿಸಿ, 5 ಲಕ್ಷ ರೂ. ವರೆಗಿನ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವ ಯೋಜನೆ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಇಂದು ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ-2022ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವಿಕಲಚೇತನರು ಧೈರ್ಯದಿಂದ ಬದುಕು ನಡೆಸಲು ಸರ್ಕಾರ ಎಲ್ಲ ಸಹಕಾರ ನೀಡಲಿದೆ. ಸರ್ಕಾರ ನಿರ್ಮಿಸುವ ಮನೆಗಳಲ್ಲಿ ಅಂಗವಿಕಲರಿಗೆ ಶೇ. 3 ರಷ್ಟು ಮೀಸಲಾತಿಯನ್ನು ನೀಡಲಾಗುವುದು. ಬುದ್ಧಿಮಾಂದ್ಯ ಮಕ್ಕಳಿಗೆ ಶೆಲ್ಟರ್ಡ್ ವರ್ಕ್ ಶಾಪ್ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದರು.