ಅಗ್ನಿ ಅವಘಡ: 7 ಹಡಗು ಬೆಂಕಿಗಾಹುತಿ

Advertisement

ಉಡುಪಿ: ಲಂಗರು ಹಾಕಿದ್ದ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಅದು ಏಳು ಬೋಟ್‌ಗಳಿಗೆ ವಿಸ್ತರಿಸಿ ಸುಟ್ಟು ಕರಕಲಾದ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ದೀಪಾವಳಿ ಸಂಭ್ರಮದ ವೇಳೆ ದುರಂತ ಸಂಭವಿಸಿದೆ. ಸ್ಥಳೀಯ ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.