ಧಾರವಾಡ: ಜಿಲ್ಲಾದ್ಯಂತ ಅನಧೀಕೃತವಾಗಿ ಅಳವಡಿಕೆ ಮಾಡಲಾದ ಮೈಕ್‌ಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಶ್ರೀರಾಮ ಸೇನೆಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಇಲ್ಲಿಯ ಹೊಸ ಬಸ್ ನಿಲ್ದಾಣದ ಹತ್ತಿರವಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಮಂಗಳವಾರ ಮುಂಜಾನೆ ಪ್ರಮೋದ ಮುತಾಲಿಕ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅವರು, ಈಗಾಗಲೇ ನ್ಯಾಯಾಲಯದ ಆದೇಶದಂತೆ ಅನಧೀಕೃತ ಮೈಕ್‌ಗಳನ್ನು ತೆರವುಗೊಳಿಸಬೇಕಿತ್ತು. ಆದರೆ, ಈವರೆಗೆ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಸಾಕಷ್ಟು ಬಾರಿ ಇದನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.
ಮಸೀದಿಗಳ ಮೇಲೆ ಮೈಕ್‌ಗಳನ್ನು ಹಾಕಿ ಹೆಚ್ಚಿನ ಪ್ರಮಾಣದಲ್ಲಿ ಶಬ್ದ ಮಾಲಿನ್ಯ ಮಾಡಲಾಗುತ್ತಿದೆ. ನ್ಯಾಯಾಲಯದ ಆದೇಶವನ್ನು ಪೊಲೀಸ್ ಇಲಾಖೆ ಕೂಡಲೇ ಪಾಲಿಸಬೇಕು. ಇಲ್ಲದಿದ್ದರೆ ಗಣೇಶೋತ್ಸವಕ್ಕೆ ಹಿಂದು ಸಮುದಾಯಕ್ಕೂ ಡಿಜೆ ಹಚ್ಚಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.