ಉತ್ತರಪ್ರದೇಶದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ಮೋದಿ ಹಾಗೂ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರ ವೇಷ ತೊಟ್ಟಿದ್ದ ಇಬ್ಬರು ಬಾಲಕರನ್ನು ಗುರುತಿಸಿದ ಪ್ರಧಾನಿ ನರೇಂದ್ರ ಮೋದಿ, ʼʼಯೇ ಕ್ಯಾ ಬಡಿಯಾ ಮೇಕ್ ಅಪ್ ಕಿಯಾ ಹೇ(ಅಬ್ಬಾ ಎಂಥಾ ಮೇಕಪ್ ಮಾಡಿದ್ದೀರಿ)” ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಗಮನ ಸೆಳೆದಿದ್ದಾರೆ.