ಅಭ್ಯರ್ಥಿಗಳಿಗೆ ಮತ ಹಾಕಿದ ಫೋಟೋ,ವಿಡಿಯೋ ವೈರಲ್

Advertisement

ಕುಷ್ಟಗಿ: ಮತಗಟ್ಟೆಗೆ ಮೊಬೈಲ್ ನಿಷೇಧವಿದ್ದರೂ ಕುಷ್ಟಗಿ ಕ್ಷೇತ್ರದಲ್ಲಿ ಹಲವಾರು ಕಡೆ ಮತ ಹಾಕಿದ ಫೋಟೋ, ವಿಡಿಯೋ ಸೆರೆ ಹಿಡಿದು ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ. ಆ ಮೂಲಕ ಗೌಪ್ಯ ಮತದಾನಕ್ಕೆ ಧಕ್ಕೆ ತರಲಾಗಿದೆ.
ಕುಷ್ಟಗಿ ತಾಲೂಕಿನ ನಾನಾ ಮತಗಟ್ಟೆಯಲ್ಲಿ ಕಾಂಗ್ರೆಸ್‌ಗೆ, ಬಿಜೆಪಿಗೆ ಮತ ಹಾಕಿರುವುದಾಗಿ ಅಭ್ಯರ್ಥಿಗಳಿಗೆ ತೋರ್ಪಡಿಸಿಕೊಳ್ಳಲು ಮೊಬೈಲ್‌ನಲ್ಲಿ ಫೋಟೋ, ವಿಡಿಯೋ ತೆಗೆದು ತಮ್ಮ ವಾಟ್ಸ್‌ಆ್ಯಪ್ ಸ್ಟೇಟಸ್‌ನಲ್ಲಿ ಅಪ್ ಲೋಡ್ ಮಾಡಿಕೊಂಡಿದ್ದು, ಅದೀಗ ವೈರಲ್ ಆಗಿದೆ.
ಕಾಂಗ್ರೆಸ್ ಅಭ್ಯರ್ಥಿ,ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರಿಗೆ ವ್ಯಕ್ತಿಯೊಬ್ಬ ಮತ ಹಾಕಿದ್ದಾನೆ. ಅದೇ ರೀತಿಯಲ್ಲಿ ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲಗೆ ಮತ ಹಾಕಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಅನೇಕರು ವಾಟ್ಸ್‌ಆಪ್ ಸ್ಟೇಟಸ್‌ನಲ್ಲಿ ಬಳಸಿಕೊಂಡಿದ್ದಾರೆ. ಕುಷ್ಟಗಿ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದ್ದು ಖಚಿತವಾಗಿಲ್ಲ. ಈ ಬಗ್ಗೆ ಪ್ಲೇಯಿಂಗ್ ಸ್ಕ್ವಾಡ್ ದೂರು ನೀಡಿದ ಬಳಿಕ ನಂತರ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಪಿಐ ನಿಂಗಪ್ಪ ರುದ್ರಪ್ಪಗೋಳ, ಪಿಎಸೈ ಮೌನೇಶ್ ರಾಠೋಡ್ ಖಚಿತ ಮಾಹಿತಿ ನೀಡಿದರು