ಅಮಿತ್‌ ಮಾಳವಿಯಾ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

Advertisement

ನವದೆಹಲಿ: ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದ್ದು, ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸುತ್ತಿದ್ದೇವೆ ಎಂದು ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮಹಿಳೆಯರ ಲೈಂಗಿಕ ಶೋಷಣೆಯಲ್ಲಿ ತೊಡಗಿದ್ದಾರೆ. 5 ಸ್ಟಾರ್ ಹೋಟೆಲ್‌ಗಳು ಮಾತ್ರವಲ್ಲದೆ, ಪಶ್ಚಿಮ ಬಂಗಾಳದ ಬಿಜೆಪಿ ಕಚೇರಿಯಲ್ಲೂ ನೀಚ ಕೃತ್ಯವೆಸಗಿದ್ದಾರೆ ಎಂದು ಆರ್‌ಎಸ್‌ಎಸ್ ಸದಸ್ಯ ಶಾಂತನು ಸಿನ್ಹಾ ಆರೋಪಿಸಿದ್ದಾರೆ ಎಂದು ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಉಳಿದುಕೊಂಡಿದ್ದ ವೇಳೆ ಮಾಳವಿಯಾ ಅವರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದರೆಂದು ಸಿನ್ಹಾ ತಮ್ಮ ಪೋಸ್ಟ್‌ನಲ್ಲಿ ಆರೋಪಿಸಿದ್ದರು.
ಈ ವಿಚಾರದ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ನಾಯಕಿ ಸುಪ್ರಿಯಾ ಶ್ರಿನೇತ್, ಬಿಜೆಪಿ ಮಾಳವಿಯಾ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇನ್ನು ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯಾ ಅವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೆಸ್ಸೆಸ್‌ ಸದಸ್ಯ ಸನಾತನು ಸಿನ್ಹಾ ಆರೋಪದ ಬೆನ್ನಲ್ಲೇ ಅವರ ವಿರುದ್ಧ ರೂ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಇಂದು ಮಾಳವಿಯಾ ಹೂಡಿದ್ದಾರೆ.