ಕರ್ನಾಟಕದ ನೀರಾವರಿ ಯೋಜನೆ ಬಗ್ಗೆ ಮಾತನಾಡದ ಅಮಿತ್ ಶಾ ಕಪಟಿ: ಸುರ್ಜೇವಾಲಾ ವಾಗ್ದಾಳಿ

ರಣದೀಪ ಸಿಂಗ್ ಸುರ್ಜೇವಾಲಾ
Advertisement

ಹುಬ್ಬಳ್ಳಿ: ಕರ್ನಾಟಕದ ಕೃಷ್ಣಾ ನೀರಾವರಿ ಯೋಜನೆ-೩ ಹಾಗೂ ಮಹದಾಯಿ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿ ಮಾಡದೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಈ ರಾಜ್ಯದ ಜನರಿಗೆ ದ್ರೋಹ ಬಗೆದಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸಿಂಗ್ ಸುರ್ಜೇವಾಲಾ ಆರೋಪಿಸಿದರು.
ವಿಜಯಪುರಕ್ಕೆ ತೆರಳುವ ಮುನ್ನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎಂಟು ವರ್ಷಗಳಿಂದಲೂ ಕೇಂದ್ರ ಬಿಜೆಪಿ ಸರ್ಕಾರವು ಉದ್ದೇಶ ಪೂರ್ವಕವಾಗಿ ಮಹದಾಯಿ, ಕೃಷ್ಣಾ ನೀರಾವರಿ ಯೋಜನೆ ೩ನೇ ಹಂತದ ಅನುಷ್ಠಾನಕ್ಕೆ ಉಪೇಕ್ಷೆ ಮಾಡಿಕೊಂಡು ಬಂದಿದೆ ಎಂದು ಆರೋಪಿಸಿದರು. ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದ್ದಾರೆ. ಆದರೆ, ಅವರು ಈ ರಾಜ್ಯದ ಪ್ರಮುಖ ಬೇಡಿಕೆಗಳಾದ ನೀರಾವರಿ ಯೋಜನೆಗಳ ಬಗ್ಗೆ ಮಾತನಾಡುವುದಿಲ್ಲ. ಯಾಕೆಂದರೆ ಅವರ ಮನಸ್ಸು ಕಪಟತನದಿಂದ ಕೂಡಿದೆ. ಜನಹಿತ ಬೇಕಾಗಿಲ್ಲ. ಅವರೊಂದಿಗೆ ವೇದಿಕೆ ಹಂಚಿಕೊಳ್ಳುತ್ತಿರುವ ರಾಜ್ಯದ ಬಿಜೆಪಿ ಮುಖಂಡರಿಗೂ ಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಅನುಮತಿ ಸಿಕ್ಕಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ, ಪರಿಸರ ಇಲಾಖೆ ಪರವಾನಗಿ ಎಲ್ಲಿದೆ? ಟೆಂಡರ್ ಕರೆದಿದ್ದಾರಾ? ಕಾಮಗಾರಿ ಶುರು ಮಾಡಿದ್ದಾರಾ ಎಂದು ಪ್ರಶ್ನಿಸಿದರು.
ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಮುಂದಿನ ಚುನಾವಣೆಯಲ್ಲಿ ಜನಾಶೀರ್ವಾದ ಲಭಿಸಿದರೆ ಈ ಯೋಜನೆ ಜಾರಿಗೆ ೫೦೦೦ ಕೋಟಿ ನಿಗದಿಪಡಿಸಿ ಕ್ಯಾಬಿನೆಟ್‌ನಲ್ಲಿ ಘೋಷಣೆ ಮಾಡಲಿದೆ ಎಂದು ಹೇಳಿದರು.
ಅದೇ ರೀತಿ ಕೃಷ್ಣಾ ನದಿ ನೀರಾವರಿ ಯೋಜನೆ-೩ ರ ಅನುಷ್ಠಾನಕ್ಕೂ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ೪೦ ಸಾವಿರ ಕೋಟಿ ಹಣವನ್ನು ಬಜೆಟ್‌ನಲ್ಲಿ ಕಾಯ್ದಿರಿಸಿ ಯೋಜನೆಯನ್ನು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸಲಿದ್ದೇವೆ