ಇಟಾನಗರ: ಸ್ಥಳೀಯ ಮಾರುಕಟ್ಟೆಯಲ್ಲಿ ಇಂದು ಮುಂಜಾನೆ ಭಾರೀ ಬೆಂಕಿ ಕಾಣಿಸಿಕೊಂಡಿರುವ ಘಟನೆಯು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸಂಭವಿಸಿದೆ. ಅರುಣಾಚಲ ಪ್ರದೇಶದ ಇಟಾನಗರ ಬಳಿಯ ಸ್ಥಳೀಯ ಮಾರುಕಟ್ಟೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರೀ ಬೆಂಕಿಯಲ್ಲಿ ಕನಿಷ್ಠ 700 ಅಂಗಡಿಗಳು ಬೂದಿಯಾಗಿವೆ. ಬೆಳಗಿನ ಜಾವ 3:30ರ ಸುಮಾರಿಗೆ ಮೊದಲು ಕಾಣಿಸಿಕೊಂಡ ಬೆಂಕಿಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ಠಾಣೆ ಸಮೀಪವೇ ಮಾರುಕಟ್ಟೆ ಇದ್ದರೂ ಅಗ್ನಿಶಾಮಕ ಅಧಿಕಾರಿಗಳು ಸಕಾಲಕ್ಕೆ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಬಗ್ಗೆ ಅಗ್ನಿಶಾಮಕ ಠಾಣೆಗೆ ಬಂದು ಮಾಹಿತಿ ನೀಡಿದರು. ಕಛೇರಿಯಲ್ಲಿ ಯಾವುದೇ ಸಿಬ್ಬಂದಿ ಪತ್ತೆಯಾಗಿಲ್ಲ ಎಂದು ಅಂಗಡಿಕಾರರು ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬರುವರೆಗೆ ನಾವೇ ಬೆಂಕಿ ನಂದಿಸಲು ಪ್ರಯತ್ನ ಮಾಡಿದ್ದೇವೆ ಎಂದು ಹೇಳಿದ್ದಾರೆ.