ಬೆಳಗಾವಿ: ಬೇರೆ ಬೇರೆ ಪಕ್ಷದಿಂದ ಬಂದು ಕಾಂಗ್ರೆಸ್‌ಗೆ ಶಕ್ತಿ ತುಂಬಿದವರು. ಗೆದ್ದಿರ ಬಹುದು, ಸೋತಿರ ಬಹುದು. ಅವರು ನಮ್ಮ ನಾಯಕರು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.
ಬುಧವಾರ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡು ಕಾಂಗ್ರೆಸ್‌ಗೆ ಶಕ್ತಿ ತುಂಬಿ ರಾಜ್ಯದಲ್ಲಿ ಸರಕಾರ ರಚನೆಯಾಗಲು ಕಾರಣರಾಗಿದ್ದಾರೆ. ಚುನಾವಣೆಯ ಮುಗಿದ ಮೇಲೆ ಶಾಸಕಾಂಗದ ಸಭೆ, ಪ್ರಮಾಣ ವಚನ, ಸಚಿವ ಸಂಪುಟದ ಒತ್ತಡದಲ್ಲಿ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಸೋಲು ಕಂಡವರೂ ಸಾಕಷ್ಟು ಜನ ಇದ್ದಾರೆ. ಅವರಿಗೆ ಶಕ್ತಿ ತುಂಬುವ ಕರ್ತವ್ಯ ನಮ್ಮದ್ದು ಎಂದರು. ಸೋಲು ಕಂಡವರಲ್ಲಿ, ಪಕ್ಷ ಬಿಟ್ಟು ಬಂದು ಶಾಸಕರಾದವರೂ ಯಾರು ಸಚಿವ ಸ್ಥಾನದ ಬೇಡಿಕೆ ಇಟ್ಟಿರಲಿಲ್ಲ. ಈಗಾಗಲೇ ಸಚಿವ ಸಂಪುಟ ಭರ್ತಿಯಾಗಿದೆ. ಮುಂದೆ ಅವರಿಗೆ ಪಕ್ಷದಲ್ಲಿ ಸ್ಥಾನ ಮಾನ ನೀಡಲಾಗುವುದು ಎಂದರು. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಬಾಸಾಹೇಬ ಪಾಟೀಲ, ಮಹೇಶ ತಮ್ಮಣ್ಣವರ, ವಿಶ್ವಾಸ ವೈದ್ಯ, ಚನ್ನರಾಜ ಹಟ್ಟಿಹೊಳಿ, ಆಸೀಫ್ ಸೇಠ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.