ಆಯನೂರು ಮಂಜುನಾಥ್ ಜೆಡಿಎಸ್‌ನಿಂದ ಸ್ಪರ್ಧೆ

Advertisement

ಚಿತ್ರದುರ್ಗ: ಬಿಜೆಪಿ ಎಂಎಲ್​ಸಿ ಆಯನೂರು ಮಂಜುನಾಥ್ ಜೆಡಿಎಸ್​ಗೆ ಸೇರ್ಪಡೆಯಾಗಿದ್ದಾರೆ, ಚಿತ್ರದುರ್ಗ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ಬಾವುಟ ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಇದೇ ವೇಳೆ ಬಿ ಫಾರಂ ಕೂಡ ನೀಡಿದ್ದು ಶಿವಮೊಗ್ಗದಿಂದಲೇ ಕಣಕ್ಕಿಯಲು ಆಯನೂರು ಮಂಜುನಾಥಗೆ ಅವಕಾಶ ಕೊಟ್ಟಿದ್ದಾರೆ, ಸಂಜೆ ಆಯನೂರು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಜೊತೆಗೆ ನಾಳೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇನ್ನು ಬಿಜೆಪಿಗೆ ರಾಜೀನಾಮೆ ನೀಡುತ್ತಿರುವೆ. ಟಿಕೆಟ್​ಗೋಸ್ಕರ ನಾನು ಪಕ್ಷ ಬಿಡುತ್ತಿಲ್ಲ. ನಗರದ ಋಣ ತೀರಿಸಲು ಈ ನಿರ್ಧಾರ ಮಾಡಿರುವೆ ಎಂದು ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದರು.