ಆರೋಗ್ಯ ಇಲಾಖೆ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ

ಆತ್ಮಹತ್ಯೆ
Advertisement

ಬೆಂಗಳೂರು: ಮಂಡ್ಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಯಾಗಿರುವ ನಟರಾಜ್ ಬೆಂಗಳೂರು ನಗರದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಹೃದಯಾಘಾತವಾಗಿದ್ದ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಕ್ಕೆ ಹೋಗಿ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್​ಒ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.