ಆರ್‌ಬಿಐ ರೆಪೊ ದರ ಯಥಾಸ್ಥಿತಿ

Advertisement

ನವದೆಹಲಿ: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ರೆಪೋ ದರವನ್ನು ಶೇ.6.50 ಯಥಾಸ್ಥಿತಿಯಲ್ಲಿ ಇರಿಸಲು ನಿರ್ಧರಿಸಿದೆ
ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರು 2023-24ರ ಹಣಕಾಸು ವರ್ಷದ ದ್ವೈಮಾಸಿಕ ಹಣಕಾಸು ನೀತಿಯನ್ನು ಶುಕ್ರವಾರ ಪ್ರಕಟಿಸಿದ್ದಾರೆ. ಹಣದುಬ್ಬರದ ಮೇಲೆ ಬಿಗಿಯಾದ ಜಾಗರೂಕತೆಯನ್ನು ಕಾಯ್ದುಕೊಳ್ಳುತ್ತಿರುವ ಕಾರಣ ಸತತ ನಾಲ್ಕನೇ ಬಾರಿಗೆ ನೀತಿ ದರವನ್ನು ಯಥಾಸ್ಥಿತಿಯಲ್ಲಿ ಇರಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ನಿರ್ಧರಿಸಿದೆ.
ಶುಕ್ರವಾರ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ವಿತ್ತೀಯ ನೀತಿ ಸಮಿತಿ (ಎಂಪಿಸಿ) ಸರ್ವಾನುಮತದಿಂದ ರೆಪೊ ದರವನ್ನು ಶೇಕಡಾ 6.5 ರಷ್ಟು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಎಂದು ಹೇಳಿದರು.