ಮಂಗಳೂರು: ದೈವರಾಧನೆಯ ವಿಷಯ ಹೊಂದಿರುವ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಜನಮನ ಗೆದ್ದು ದಾಖಲೆ ನಿರ್ಮಿಸಿದ ‘ಕಾಂತಾರ’ ಆಸ್ಕರ್ ಸ್ಪರ್ಧೆಯಲ್ಲಿದೆ.
ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ವಿಭಾಗದಲ್ಲಿ ‘ಕಾಂತಾರಾ’ ಅರ್ಹತೆ ಸುತ್ತನ್ನು ದಾಟಿದೆ. ಆಸ್ಕರ್ ಸದಸ್ಯರು ಮತ ಚಲಾಯಿಸಿದರೆ ‘ಕಾಂತಾರ’ ಸಿನಿಮಾ ಪ್ರಮುಖ ನಾಮಿನೇಷನ್ ವಿಭಾಗಕ್ಕೆ ಪ್ರವೇಶ ಪಡೆಯಲಿದೆ. ೩೦೧ ಸಿನಿಮಾಗಳು ಅರ್ಹತೆ ಸುತ್ತನ್ನು ಪಾಸ್ ಮಾಡಿವೆ.
ಈ ಕುರಿತು ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿರುವ ರಿಷಬ್ ಶೆಟ್ಟಿ, ಬೆಂಬಲಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಿಸಿತ್ತು. ಇತ್ತೀಚೆಗಷ್ಟೇ ‘ಕಾಂತಾರ’ ಶತ ದಿನ ಪೂರೈಸಿತ್ತು. ಈ ಸಂತಸವನ್ನು ಚಿತ್ರತಂಡ ಹಂಚಿಕೊಂಡಿತ್ತು.