ಉದ್ಯಮಿಗೆ ವಂಚನೆ ಪ್ರಕರಣ: ಸ್ವಾಮೀಜಿ ನಾಪತ್ತೆ

Advertisement

ವಿಜಯನಗರ: ಉದ್ಯಮಿಯೊಬ್ಬರಿಗೆ ಬಿಜೆಪಿ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ವಿರುದ್ಧ ಕೇಸ್‌ ದಾಖಲಾಗುತ್ತಿದ್ದಂತೆ ಹಿರೇ ಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ ನಾಪತ್ತೆಯಾಗಿದ್ದಾರೆ.
ಚೈತ್ರಾ ಕುಂದಾಪುರ ಸೇರಿದಂತೆ 8 ಜನರ ವಿರುದ್ಧ ಉದ್ಯಮಿ ಗೋವಿಂದ ಪೂಜಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರಳನ್ನು ಬಂಧಿಸಿದ್ದಾರೆ. ಪ್ರಕರಣದ ಮತ್ತೊಬ್ಬ 3ನೇ ಆರೋಪಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇ ಹಡಗಲಿ ಹಾಲು ಮಠದ ಅಭಿನವ ಹಾಲಶ್ರೀ, ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಹಿಂದೂಪರ ಸಂಘಟನೆಗಳಲ್ಲಿ ಗುರುಸಿಕೊಂಡಿರುವ ಹಾಲಶ್ರೀ ವಂಚನೆ ಪ್ರಕರಣದಲ್ಲಿ A3 ಆರೋಪಿ ಆಗಿದ್ದಾರೆ. ಬೆಳಗಿನಿಂದ ಹಾಲಶ್ರೀ ಮೊಬೈಲ್ ಸ್ವಿಚ್ಆಫ್ ಆಗಿದ್ದು, ಹಾಲ ಮಠಕ್ಕೂ ಬಾರದೇ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.