ಎರಡು ಕುಟುಂಬದ ನಡುವೆ ಮಾರಾಮಾರಿ: ಇಬ್ಬರಿಗೆ ಗಂಭೀರ ಗಾಯ

Advertisement

ಹುಬ್ಬಳ್ಳಿ: ಕ್ಷುಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಚಾಕು ಚೂರಿಯಿಂದ ಹಲ್ಲೆ ಮಾಡಿಕೊಂಡಿದ್ದು, ಇಬ್ಬರು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶುಕ್ರವಾರ ನಡೆದಿದೆ.
ಗಬ್ಬೂರಿನ ಬಸವೇಶ್ವರನಗರದ ಶಂಭುಲಿಂಗ ಹಾಗೂ ಸುಭಾಸ್ ಎಂಬುವರ ಕುಟುಂಬದವರಿಗೆ ಗಲಾಟೆಯಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿದ ವೇಳೆ, ಪರಸ್ಪರ ಚೈನ್ ಹಾಗೂ ಚಾಕುವಿನಿಂದ ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆಯಲ್ಲಿ ಎರಡು ಕಡೆಯವರಿಗೂ ಕೂಡಾ ಗಾಯಗಳಾಗಿವೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಇದುವರೆಗೂ ಎರಡು ಕುಟುಂಬದವರಿಂದ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.