ಐಶ್ವರ್ಯಗೆ CBI ಬುಲಾವ್‌

Advertisement

ಬೆಂಗಳೂರು: ಫೆ.27 ರಂದು ವಿಚಾರಣೆಗೆ ಬರುವಂತೆ ಡಿ.ಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಹಾಗೆಯೇ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಗೆ ಸಿಬಿಐ ನೋಟಿಸ್ ನೀಡಿದೆ. ನೋಟಿಸ್ ಬಂದಿರುವ ಬಗ್ಗೆ ಸ್ಪಷ್ಟನೆ ನೀಡಿರುವ ಡಿ.ಕೆ ಶಿವಕುಮಾರ್, ನನಗೆ ಇಡಿಯಿಂದ ನೊಟೀಸ್ ಬಂದಿದೆ.
ಡಿಕೆಶಿ ಅಕ್ರಮ ಆಸ್ತಿ ಸಂಪಾದನೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಎರಡು ತಿಂಗಳ ಹಿಂದೆ ಡಿಕೆಶಿ ಒಡೆತನದ ಕಾಲೇಜಿನಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಎರಡು ತಿಂಗಳು ನಿರಂತರವಾಗಿ ದಾಖಲೆಗಳನ್ನು ಪರಿಶೀಲಿಸಿ ಬಳಿಕ ಗ್ಲೋಬಲ್ ಕಾಲೇಜಿನಲ್ಲಿ ನಿರ್ದೇಶಕಿ ಆಗಿರುವ ಐಶ್ವರ್ಯಗೆ ನೋಟಿಸ್ ನೀಡಿದ್ದಾರೆ. 10 ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಈ ಹಿಂದೆ ಡಿಕೆಶಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಿದ್ದಾಗ, ಕಾಲೇಜು ಟ್ರಸ್ಟ್‌ನ ಅಡಿಯಲ್ಲಿ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ ತನಿಖೆ ನಡೆಸಿ ಕಾಲೇಜಿನ ಫೀಸ್, ಕಾಲೇಜಿನ ಆಯವ್ಯಯ ಪಟ್ಟಿಯ ಸಮೇತ ವಿಚಾರಣೆಗೆ ಹಾಜರಾಗಲು ಐಶ್ವರ್ಯಗೆ ನೋಟಿಸ್ ನೀಡಿದೆ.
ಈ ಸಂದರ್ಭದಲ್ಲಿ ಇವೆಲ್ಲಾ ನಡೆಯುತ್ತಿದೆ. ಕೇವಲ ನಮಗೆ ಮಾತ್ರ ಇಡಿ ಸಿಬಿಐ ಇರುವುದು. ಆಡಳಿತಪಕ್ಷದವರಿಗೆ ಇಡಿ ಸಿಬಿಐ ಇಲ್ಲ. ಎಷ್ಟು ಕೋಟಿಯಾದರೂ ತಿನ್ನಿ ಇಡಿ ಕೇಳುವುದಿಲ್ಲ ಎಂದು ಬಿಜೆಪಿ ನಾಯಕರಿಗೆ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದರು.