ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಈ ಹಿಂದೆ ಅನುಮತಿ ನಿರಾಕರಿಸಿದ್ದ ಸಮಿತಿ ಕೊನೆ ಕ್ಷಣದಲ್ಲಿ ರಾಜ್ಯದ ಟ್ಯಾಬ್ಲೊಗೆ ಅವಕಾಶ ನೀಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿದಂತಾಗಿದೆ.
13ವರ್ಷಗಳಿಂದ ಕರ್ನಾಟಕ ಗಣರಾಜೋತ್ಸವ ಪರೇಡ್‌ನಲ್ಲಿ ಸ್ತಬ್ಧ ಚಿತ್ರ ಪ್ರದರ್ಶಿಸಿತ್ತು. ಈ ಬಾರಿ ಬೇರೆ ರಾಜ್ಯಗಳಿಗೆ ಅವಕಾಶ ನೀಡುವ ದೃಷ್ಟಿಯಿಂದ ಕರ್ನಾಟಕಕ್ಕೆ ಅನುಮತಿ ಇಲ್ಲ ಎಂದು ಟ್ಯಾಬ್ಲೋ ಆಯ್ಕೆ ಸಮಿತಿ ಹೇಳಿತ್ತು. ಸಮಿತಿಯ ನಿರ್ಧಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಕರ್ನಾಟಕಕ್ಕೆ ಆದ ಅನ್ಯಾಯ ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ಜನರು ಸೋಶಿಯಲ್ ಮೀಡಿಯಾಗಳಲ್ಲಿ ಕೂಡ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಇದನ್ನೆಲ್ಲ ಗಮನಿಸಿದ ರಾಜ್ಯ ಸರ್ಕಾರ ಕೇಂದ್ರದ ಮಟ್ಟದಲ್ಲಿ ಒತ್ತಡ ತರುವ ಪ್ರಯತ್ನ ಮಾಡಿತ್ತು. ಚುನಾವಣಾ ವರ್ಷದಲ್ಲಿ ವಿವಾದಗಳನ್ನು ಸೃಷ್ಟಿಸಲು ಹಿಂಜರಿದಿರುವ ಕೇಂದ್ರ ಸರ್ಕಾರ ಕರ್ನಾಟಕದ ಟ್ಯಾಬ್ಲೋ ಪ್ರದರ್ಶನಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲೇ ಆಯ್ಕೆ ಸಮಿತಿ ಕರ್ನಾಟಕದ ನಾರಿ ಶಕ್ತಿ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಿದ್ದು, 14 ಬಾರಿ ಕರ್ತವ್ಯ ಪಥ್‌ನಲ್ಲಿ ರಾಜ್ಯದ ಟ್ಯಾಬ್ಲೋ ಪ್ರದರ್ಶನಗೊಳ್ಳಲಿದೆ.