ಬೆಂಗಳೂರು: ಕರ್ನಾಟಕ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಮುಂದುವರೆದಿದೆ. ಬಿಜೆಪಿಯ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಟ್ವೀಟ್ ಮಾಡಿದ್ದ ಕಾಂಗ್ರೆಸ್‌ಗೆ ಈಗ ಬಿಜೆಪಿ ತಿರುಗೇಟು ನೀಡಿದೆ.ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಓಣಂ ಊಟ ಸವಿದು ಅದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಶುಕ್ರವಾರ ಟ್ವೀಟ್ ಮಾಡಿದೆ.