ಕಬ್ಬು ಬೆಳೆಗಾರರ ಪ್ರತಿಭಟನೆ: ಸರಕಾರಕ್ಕೆ ನಾಳೆವರೆಗೆ ಗಡುವು

ಧಾರವಾಡ ರೈತರು
Advertisement

ಧಾರವಾಡ: ಕಳೆದ ಎರಡು ದಿನಗಳಿಂದ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದರೂ ಸಕ್ಕರೆ ಸಚಿವರು ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ನಾಳೆವರೆಗೆ ಸರಕಾರಕ್ಕೆ ಪ್ರತಿಭಟನಾಕಾರರು ಗಡುವು ನೀಡಿದ್ದಾರೆ.
ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಸಂಧಾನ ಸಭೆ ವಿಫಲವಾಗಿದ್ದು, ರೈತರು ಪ್ರತಿಭಟನೆ ಮುಂದುವರೆಸಿದ್ದರು.
ಬುಧವಾರ ಸಂಜೆ ಪ್ರತಿಭಟನಾ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಸಚಿವರು, ಸರಕಾರ ರೈತರ ಪರವಾಗಿದೆ. ಬರುವ ದಿ. 10 ರಂದು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಮಾಡಲಿದ್ದಾರೆ. ಆದ್ದರಿಂದ ಪ್ರತಿಭಟನೆ ಹಿಂಪಡೆಯಬೇಕು ಎಂದು ಸರಕಾರದ ಪರ ಮನವಿ ಮಾಡಿದರು.

ಆದರೆ, ಇದಕ್ಕೆ ಒಪ್ಪದ ಪ್ರತಿಭಟನಾಕಾರರು ನಾಳೆ ಸಕ್ಕರೆ ಸಚಿವರು ಸ್ಥಳಕ್ಕೆ ಭೇಟಿ ಮಾಡಿ ಸಮಸ್ಯೆ ಪರಿಹರಿಸಬೇಕು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಸರಕಾರವೇ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.