ಬೆಂಗಳೂರು: ವಿಧಾನ ಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟಗೊಳಿಸಿದ್ದು, 2024ರ ಜನವರಿ 1ರೊಳಗೆ ತಿದ್ದುಪಡಿ ಮಾಡಿಕೊಳ್ಳಲು, ಹೆಸರು ಸೇರ್ಪಡೆಗೆ ಅವಕಾಶ ಇರಲಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ ಮಾಡಲಾಗಿದ್ದು, ಡಿಸೆಂಬರ್ 9ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಇರಲಿದೆ. ಅದೇ ರೀತಿ ನಾಲ್ಕು ವಿಶೇಷ ಅಭಿಯಾನಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಮುಖ್ಯ ಚುನಾವಣಾಧಿಕಾರಿ ವೆಬ್ ಸೈಟ್‌ನಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಇಲ್ಲಿ ಸಾರ್ವಜನಿಕರು ಪರಿಶೀಲಿಸಿಕೊಳ್ಳಬಹುದು. ಹಾಗೆಯೇ ತಿದ್ದುಪಡಿ ಅಗತ್ಯವಿದ್ದರೆ ಪ್ರತಿ ವಿಧಾನಸಭಾ ಕ್ಷೇತ್ರದ ಅಧಿಸೂಚಿತ ನೋಂದಣಾಧಿಕಾರಿ ಅಥವಾ ಸಹಾಯಕ ನೋಂದಣಾಧಿಕಾರಿ ನಿಗದಿತ ನಮೂನೆಗಳಲ್ಲಿ ಸಲ್ಲಿಸಬೇಕಾಗುತ್ತದೆ. ಹೆಸರು ತಪ್ಪಾಗಿರುವುದು, ಫೋಟೋ ವ್ಯತ್ಯಾಸ ಇರುವುದು, ಮೊಬೈಲ್ ಸಂಖ್ಯೆ, ಲಿಂಗ ತಿದ್ದುಪಡಿ, ಹುಟ್ಟಿದ ದಿನಾಂಕ ಬದಲಾವಣೆ, ವಿಳಾಸ ಬದಲಾವಣೆ ಹೀಗೆ ಹಲವು ರೀತಿಯ ತಿದ್ದುಪಡಿಗೆ ಅವಕಾಶವಿರುತ್ತದೆ.