ರಾಯಚೂರು: ಕರ್ತವ್ಯನಿರತ ಚುನಾವಣಾ ಅಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಜಾಗೀರಜಾಡಲದಿನ್ನಿ ಗ್ರಾಮದ ಮತಗಟ್ಟೆಯಲ್ಲಿ ನಡೆದಿದೆ.
ಮುಖ್ಯೋಪಾಧ್ಯಾಯರಾಗಿದ್ದ ಬಸವರಾಜ್(56) ಮೃತಪಟ್ಟವರೆಂದು ಗುರುತಿಸಲಾಗಿದೆ. ಬಿಎಲ್ಒ ಕರ್ತವ್ಯಕ್ಕೆ ಬಸವರಾಜ್ ಅವರನ್ನು ನಿಯೋಜಿಸಲಾಗಿತ್ತು. ಏಲ್ಲ ಸಿಬ್ಬಂದಿಯಂತೆ ಕಾರ್ಯನಿರ್ವಹಿಸುತ್ತಿದ್ದ ಅವರು, ಏಕಾಏಕಿ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.