ಕಲಾವಿದರಿಗೆ ದೊಡ್ಡ ಕನಸು ಕಾಣಲು ಪ್ರೇರಕ

Advertisement

ಸಂಗೀತ ಕ್ಷೇತ್ರದಲ್ಲಿ ಪ್ರತಿಷ್ಠಿತ ಎಂದೇ ಪರಿಗಣಿಸಲಾದ ಗ್ರ್ಯಾಮಿ ಪ್ರಶಸ್ತಿ ಪ್ರದಾನ ಸಮಾರಂಭ ಲಾಸ್​ ಏಂಜಲೀಸ್​​​ನಲ್ಲಿ ನಡೆಯಿತು. ಹಾಡುಗಾರ ಶಂಕರ್ ಮಹಾದೇವನ್​ ಹಾಗೂ ಜಾಕಿರ್ ಹುಸೇನ್​ ಅವರ ‘ಶಕ್ತಿ ಬ್ಯಾಂಡ್’ ಈ ಬಾರಿ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ‘ದಿಸ್ ಮೂಮೆಂಟ್’ ಹೆಸರಿನ ಆಲ್ಬಂಗೆ ಬೆಸ್ಟ್ ಗ್ಲೋಬಲ್ ಮ್ಯೂಸಿಕ್ ಆಲ್ಬಂ ವಿಭಾಗದಲ್ಲಿ ಪ್ರಶಸ್ತಿ ಬಂದಿದೆ. 66ನೇ ಗ್ರ್ಯಾಮಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಸ್ತಾದ್ ಜಾಕಿರ್ ಹುಸೇನ್ ಮೂರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ತಬಲಾ ವಾದಕ ಮತ್ತು ಸಂಗೀತ ಸಂಯೋಜಕ ಉಸ್ತಾದ್ ಜಾಕಿರ್ ಹುಸೇನ್ ಅವರು ‘ಪಾಷ್ಟೋ’ಗಾಗಿ ‘ಅತ್ಯುತ್ತಮ ಜಾಗತಿಕ ಸಂಗೀತ ಪ್ರದರ್ಶನ’ ವಿಭಾಗದಲ್ಲಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ನಿಮ್ಮ ಅದ್ಭುತ ಯಶಸ್ಸಿನ ಮೇಲೆ ನಿಮ್ಮ ಅಸಾಧಾರಣ ಪ್ರತಿಭೆ ಮತ್ತು ಸಂಗೀತಕ್ಕೆ ಸಮರ್ಪಣೆ ವಿಶ್ವದಾದ್ಯಂತ ಹೃದಯಗಳನ್ನು ಗೆದ್ದಿದೆ. ಭಾರತಕ್ಕೆ ಹೆಮ್ಮೆ! ಈ ಸಾಧನೆಗಳು ನೀವು ಪಡುತ್ತಿರುವ ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ಇದು ಹೊಸ ಪೀಳಿಗೆಯ ಕಲಾವಿದರಿಗೆ ದೊಡ್ಡ ಕನಸು ಕಾಣಲು ಮತ್ತು ಸಂಗೀತದಲ್ಲಿ ಉತ್ತಮ ಸಾಧನೆ ಮಾಡಲು ಪ್ರೇರೇಪಿಸುತ್ತದೆ, “ಎಂದು ಪ್ರಧಾನಿ ಪೋಸ್ಟ್ ಮಾಡಿದ್ದಾರೆ.