ಬಳ್ಳಾರಿ: ಮಾಜಿ ಸಚಿವ ಹಾಗೂ ಗಣಿಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆಯ ಪ್ರವೇಶ ನಿರ್ಬಂಧವಿದೆ. ಹಾಗಾಗಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸಿ ಕೊಪ್ಪಳ ಕ್ಷೇತ್ರದಲ್ಲಿ ರಾಜಿಕೀಯವಾಗಿ ತೊಡಗಿಕೊಂಡಿದ್ದಾರೆ. ಇತ್ತ ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಕುರಿತಾಗಿ ಪ್ರಚಾರ ನಡೆಸಿದ್ದಾರೆ. ಇದರ ನಡುವೆ ಬಳ್ಳಾರಿ ಕ್ಷೇತ್ರದಿಂದ ಅರುಣಾ ಲಕ್ಷ್ಮಿ ಅವರನ್ನು ಕಣಕ್ಕಿಳಿಯೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸದ್ಯ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಾವುಟ ಬಿಡುಗಡೆ ಮಾಡಿ ಅವರು ಮಾತನಾಡಿದ್ದಾರೆ. ಜನರಿಂದ ಜನಾರ್ದನ ರೆಡ್ಡಿ ದೂರ ಮಾಡಲು ಯಾರಿಂದಲೂ ಆಗಲ್ಲ ಎಂದರು.