ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

Advertisement

ನವದೆಹಲಿ : ಸೋನಿಯಾ ಗಾಂಧಿಯನ್ನು ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಜ್ವರ, ಕೆಮ್ಮು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸದ್ಯ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದೆ. ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಆಸ್ಪತ್ರೆ ವೈದ್ಯರ ತಂಡ ಹೇಳಿದೆ. ಸೋನಿಯಾ ಗಾಂಧಿ ಆಸ್ವಸ್ಥಗೊಂಡ ಕಾರಣ ನಿನ್ನೆ ಆಸ್ಪತ್ರೆ ದಾಖಲಿಸಲಾಗಿದೆ. ಸೋನಿಯಾ ಗಾಂಧಿ ಚಿಕಿಕ್ಸೆಯನ್ನು ನುರಿತ ತಜ್ಞ ವೈದ್ಯರ ತಂಡ ನೋಡಿಕೊಳ್ಳುತ್ತಿದೆ. ಸದ್ಯ ವೈದ್ಯರ ನಿಗಾದಲ್ಲಿರುವ ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದೆ ಎಂದು ಆಸ್ಪತ್ರೆಯ ಟ್ರಸ್ಟ್ ಸೊಸೈಟಿಯ ಅಧ್ಯಕ್ಷ ಡಿ. ಎಸ್. ರಾಣಾ ತಿಳಿಸಿದ್ದಾರೆ.