ನವದೆಹಲಿ: ಕಾಂಗ್ರೆಸ್ ಪಕ್ಷ 1,700 ಕೋಟಿ ರೂ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿದೆ.
ಟ್ಯಾಕ್ಸ್ ನೋಟೀಸ್ಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿನ್ನೆ ಗುರುವಾರ ತಿರಸ್ಕರಿಸಿತ್ತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ಹೊಸ ನೋಟೀಸ್ ನೀಡಿದೆ. 2017-18ನೇ ಸಾಲಿನಿಂದ 2020-21ನೇ ಹಣಕಾಸು ಸಾಲಿನಲ್ಲಿ ಕಾಂಗ್ರೆಸ್ ತೆರಿಗೆ ರಿಟರ್ನ್ಸ್ ವೇಳೆ ವ್ಯತ್ಯಾಸವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐಟಿ ಇಲಾಖೆಯು ಕಾಂಗ್ರೆಸ್‌ಗೆ 1,700 ಕೋಟಿ ರೂ. ಡಿಮ್ಯಾಂಡ್ ನೋಟಿಸ್ ಜಾರಿಗೊಳಿಸಿದೆ.