ಕಲಬುರಗಿ: ಕಾಂಗ್ರೆಸ್‌ನವರು ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲಿಸುತ್ತಿದ್ದು, ಅವರಿಗೆ ಹಿಂದೂಗಳು ಬೇಕಾಗಿಲ್ಲ ಎಂದು ಶಾಸಕ ಬಸನಗೌಡ ಯತ್ನಾಳ ಕಿಡಿಕಾರಿದರು.
ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆಶಿಗೆ ಮಂಗಳೂರು, ಬೆಳಗಾವಿ ,ಕುಕ್ಕರ್‌ಗಳ ಮೇಲೆ ಹೆಚ್ಚು ಪ್ರೀತಿ ತೋರುತ್ತಾರೆ. ಈಗ ದಾಡಿ ಬಿಟ್ಟುಕೊಂಡು ರಸ್ತೆ ಮೇಲೆ ತಿರುಗಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಹತಾಶೆಯಿಂದ ಹೇಳಿಕೆ ನೀಡುತ್ತಿದ್ದು, ಅವರಿಗೆ ಮನೆಯಲ್ಲಿಯೇ ಕುಡಿಸುತ್ತಾರೆ. ಹೀಗಾಗಿ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಗಾದಿಗಾಗಿ ರಂಪಾಟ ನಡೆದಿದೆ ಎಂದರು.