ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಹಾಗೂ ಬಿಜೆಪಿ ಪ್ರತ್ಯೇಕವಾಗಿ ಪ್ರತಿಭಟನೆಯನ್ನ ನಡೆಸಿವೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆಯನ್ನ ನಡೆಸಿದರೆ. ಇತ್ತ ಬಿಜೆಪಿ ರಾಜ್ಯ ಸರ್ಕಾರ ವಿರುದ್ದ ಧರಣೆಯನ್ನ ನಡೆಸಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಾ, ಮೋದಿ ಉಪನಾಮ ಕೇಸಿನ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹತೆ ಮಾಡಿರುವ ಕ್ರಮವನ್ನು ಖಂಡಿಸಿ ಇಡೀ ದಿನ ಕಾಂಗ್ರೆಸ್ ದೇಶಾದ್ಯಂತ ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನವಾಗಿ ಪ್ರತಿಭಟನೆ ನಡೆಸಿದ್ದಾರೆ.
“ಮೊಳಗಲಿ ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ, ಕುತಂತ್ರದಿಂದ ಸತ್ಯವನ್ನು ಮುಚ್ಚಿಡಲಾಗದು, ಕುತಂತ್ರಿ ಬಿಜೆಪಿಗೆ ಧಿಕ್ಕಾರ, ಪ್ರಜಾಪ್ರಭುತ್ವ ವಿರೋಧಿ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ” ಎಂಬಿತ್ಯಾದಿ ಭಿತ್ತಿ ಪತ್ರಗಳನ್ನು ಹಿಡಿದಿದ್ದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಹಾಗೂ ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ, ಶರಣ ಬಸಪ್ಪ, ಸಂತೋಷ್ ಲಾಡ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ತುಕಾರಾಂ, ಮಹಂತೇಶ್, ಯುಬಿ ಬಣಕಾರ್, ಬಸವರಾಜ್ ದದ್ದಲ್, ಭೀಮ್ ಸೇನ್ ಸೇರಿದಂತೆ ಹಲವರು ಬಾಯಿಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.