ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ಜೈಲಿನಲ್ಲಿ ಅಕ್ರಮ ಚಟುವಟಿಕೆ ಮಾಹಿತಿ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಆರ್. ಜೈನ್ ನೇತೃತ್ವದಲ್ಲಿ ದಾಳಿ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.
ವಿಚಾರಾಧೀನ ಕೈದಿಗಳಿರುವ ಮಂಗಳೂರು ನಗರದ ಕೊಡಿಯಾಲ್ ಬೈಲ್ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಸತತ 2 ಗಂಟೆ ನಡೆದ ಜೈಲಿನ ತಪಾಸಣೆ ವೇಳೆ ಬೀಡಿ-ಸಿಗರೇಟ್, ಗುಟ್ಕಾ, ಪಾನ್ ಮಸಾಲಾ ಪತ್ತೆಯಾಗಿದ್ದು, ದಾಳಿಯ ಮಾಹಿತಿ ಕೈದಿಗಳಿಗೆ ಮೊದಲೇ ತಲುಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಡಿಸಿಪಿ, ಎಸಿಪಿ, ಇನ್ಸ್ಪೆಕ್ಟರ್, ಪಿಎಸ್ಐ ಸೇರಿದಂತೆ 180ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ್ದಾರೆ.