ಬೆಂಗಳೂರು: ಕಿರುತೆರೆ ನಟಿ ಪವಿತ್ರಾ ಜಯರಾಮ್ (35) ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.
ಬೆಳಗ್ಗೆ ಆಂಧ್ರ ಪ್ರದೇಶದ ಕರ್ನೂಲ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕನ್ನಡದ ಕೆಲವು ಧಾರಾವಾಹಿಗಳಲ್ಲೂ ಪವಿತ್ರ ಬಣ್ಣ ಹಚ್ಚಿದ್ದರು. ಪವಿತ್ರಾ, ಮೂಲತಃ ಕರ್ನಾಟಕದವರು. ಮಂಡ್ಯ ತಾಲೂಕಿನ ಹನಕೆರೆಯವರು.