ಭಾರತ್ ಜೋಡೋ ಯಾತ್ರೆಯ ಫ್ಲೆಕ್ಸ್ಗಳನ್ನು ಹರಿದಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ಕೂಡಲೇ ಕಿಡಿಗೇಡಿಗಳನ್ನು ಅರೆಸ್ಟ್ ಮಾಡಿ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ನಮ್ಮ ಕೆಲಸ ನಾವೂ ಮಾಡುತ್ತೇವೆ. ನಾವೇನು ಕದ್ದು ಕಾರ್ಯಕ್ರಮ ಮಾಡುತ್ತಿಲ್ಲ. ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಡಿ.ಕೆ. ಶಿವಕುಮಾರ ಪೊಲೀಸರಿಗೆ ಎಚ್ಚರಿಕೆ ನೀಡಿದರು.