ಧಾರವಾಡ: ಕೃಷಿಯಲ್ಲಿ ಅಮೋಘ ಸಾಧನೆ ಮಾಡಿದ ರಾಜ್ಯದ 9 ರೈತರಿಗೆ ಕೃಷಿ ಪಂಡಿತ ಮತ್ತು 23 ರೈತರಿಗೆ ಕೃಷಿ ಪ್ರಶಸ್ತಿ(ಬೆಳೆ ಸ್ಪರ್ಧೆ) ಪ್ರದಾನ ಮಾಡಲಾಯಿತು.
ಇಲ್ಲಿಯ ಕೃಷಿ ವಿವಿ ಆವರಣದಲ್ಲಿ ಕೃಷಿ ಇಲಾಖೆ, ಜಿಲ್ಲಾಡಳಿತ, ಕೃಷಿ ವಿಶ್ವವಿದ್ಯಾಲಯದಿಂದ ಮಂಗಳವಾರ ಕೃಷಿ ವಿವಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ ಸೇರಿದಂತೆ ಇತರೆ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.