ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣರನ್ನು ಮೆಂಟಲ್ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸುವುದು ಒಳ್ಳೆಯದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಗರಂ ಆಗಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ದಾಖಲೆ ಕೊಟ್ಟರೆ ಅದರ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಕಂಪ್ಲೆಂಟ್ ಕೊಡದೇ, ನ್ಯಾಯಾಂಗ ತನಿಖೆ ಆಗಬೇಕು ಅಂತಾರೆ. ಇಂತಹ ಮನುಷ್ಯನನ್ನು ಮೆಂಟಲ್ ಆಸ್ಪತ್ರೆಗೆ ಕಳಿಸುವುದು ಒಳ್ಳೆಯದು ಎಂದರು.
