ಚಿಕ್ಕಮಗಳೂರು: ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎನ್ನುವ ಕಾರಣಕ್ಕೆ ಶಾಸಕ ಸಿ.ಟಿ ರವಿ ಅವರು ಕೆಪಿಸಿಸಿ ವಕ್ತಾರ ಮೈಸೂರಿನ ಲಕ್ಷ್ಮಣ್ ಅವರ ವಿರುದ್ಧ ಗುರುವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಇತ್ತೀಚೆಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಲಕ್ಷ್ಮಣ್ ಸಿ.ಟಿ.ರವಿ ಅವರ ವಯುಕ್ತಿಕ ವಿಚಾರ ಹಾಗೂ ಆದಾಯ, ಅಸ್ತಿಯ ವಿಚಾರವಾಗಿ ಹೇಳಿಕೆ ನೀಡಿದ್ದರು. ಈ ವೇಳೆ ತಮ್ಮ ವಿರುದ್ಧ ಇಡೀ ರಾಜ್ಯದಲ್ಲಿ ತಪ್ಪು ಅಭಿಪ್ರಾಯ ಬರುವಂತೆ ಚಾರಿತ್ರ್ಯವಧೆ ಮಾಡುವ ಕೆಲಸವನ್ನು ಲಕ್ಷ್ಮಣ್ ಮಾಡಿದ್ದಾರೆ ಎಂದು ಆರೋಪಿಸಿರುವ ರವಿ, ಹೈಕೋರ್ಟ್ ವಕೀಲ ಮಹೇಶ್ ಅವರೊಂದಿಗೆ ಖುದ್ದು ನಗರದ ೨ ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಿ ಮೊಕದ್ದಮೆ ದಾಖಲು ಮಾಡಿದರು.