ಕೊಡಗು: ಮೃತ ವಿದ್ಯಾರ್ಥಿನಿಯ ರುಂಡ ಪತ್ತೆ

Advertisement

ಮಡಿಕೇರಿ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೀನಾಳ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಧಿಸಿದಂತೆ ವಿದ್ಯಾರ್ಥಿಯ ರುಂಡ ಸೂರ್ಲಬ್ಬಿ ಗ್ರಾಮದ ಪೊದೆಯಲ್ಲಿ ಪತ್ತೆಯಾಗಿದೆ.
ವಿದ್ಯಾರ್ಥಿನಿ ಮೀನಾ (16) ತಲೆ ಕಡಿದು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಮೊಣ್ಣಂಡ ಪ್ರಕಾಶ್ ಯಾನೆ ಪಾಪು (34) ಆರೋಪಿಯನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದರು. ಇದೀಗ ಮೃತ ಬಾಲಕಿಯ ರುಂಡವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ವಿದ್ಯಾರ್ಥಿನಿ ಮೀನಾಳ ರುಂಡವನ್ನು ಬೆಟ್ಟದಲ್ಲಿ ಎಸೆದಿದ್ದಾಗಿ ಆರೋಪಿ ಹೇಳಿದ್ದ. ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆಯಾಗಿದ್ದು, ಬಾಲಕಿಯನ್ನು ಹತ್ಯೆ ಮಾಡಿದ ಬಳಿಕ ತಲೆಯನ್ನು ಆರೋಪಿ ಪ್ರಕಾಶ್ ಮರದ ಮೇಲಿರಿಸಿದ್ದ. ಇದೀಗ ಪೊಲೀಸರು ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ವಶಕ್ಕೆ ಪಡೆದಿದ್ದಾರೆ. ಮಹಜರು ಬಳಿಕ ಮರಣೋತ್ತರ ಪರೀಕ್ಷೆಗೆ ಪೊಲೀಸರು ತಲೆಯನ್ನು ಕೊಡಗು ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಿದ್ದಾರೆ.