ಕೊಪ್ಪಳ: ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಯ ಗರಿ ತಂದಿದೆ.
ಪ್ರೌಢಶಾಲಾ ವಿಭಾಗದಲ್ಲಿ ಅರುಣಾ ನರೇಂದ್ರ ಹಾಗೂ ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಿದ್ಯಾ ಕಂಪಾಪುರಮಠ ಆಯ್ಕೆಯಾಗಿದ್ದಾರೆ.
ಅರುಣಾ ನರೇಂದ್ರ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಶಿಕ್ಷಕಿ ವೃತ್ತಿಯ ಜತೆಗೆ ಸಾಹಿತ್ಯದಲ್ಲಿ ಕೃಷಿ ಮಾಡಿದ್ದಾರೆ.
ಪ್ರಾಥಮಿಕ ಶಾಲಾ ವಿಭಾಗದಲ್ಲಿ ಆಯ್ಕೆಯಾಗಿರುವ ವಿದ್ಯಾ ಕಂಪಾಪುರಮಠ ಜಿಲ್ಲೆಯ ಕುಷ್ಟಗಿ ತಾಲೂಕಿನ ನೆರಬೆಂಚಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.