ಕೋಲಾರದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ: ಎಚ್.ಡಿ. ಕುಮಾರಸ್ವಾಮಿ

ಕೋಲಾರ
Advertisement

ಬಾಗಲಕೋಟೆ: ಹಿಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡಿರುವ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಸ್ಪರ್ಧಿಸುವ ಕೋಲಾರ ಕ್ಷೇತ್ರದಲ್ಲೂ ಜೆಡಿಎಸ್ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.
ಗುಳೇದಗುಡ್ಡ ಪಟ್ಟಣದ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಅಧಿಕಾರ ಕಳೆದುಕೊಂಡು ಕುಮಾರಸ್ವಾಮಿ ನಮ್ಮ ಮೇಲೆ ಗೂಬೆ ಕೂರಿಸುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಸಮ್ಮಿಶ್ರ ಸರ್ಕಾರ ಪತನ ಅಮೆರಿಕಕ್ಕೆ ಹೋಗಿದ್ದರಿಂದ ಆಯಿತೆ..? ಸರ್ಕಾರ ರಚನೆಯಾದ ಮೂರೇ ತಿಂಗಳಲ್ಲಿ ಧರ್ಮಸ್ಥಳದ ಸಿದ್ಧವನದಲ್ಲಿ ಇವರು ಏನು ಹೇಳಿದ್ದರು. ಸರ್ಕಾರ ಒಂದು ವರ್ಷ ಆದ್ಮೇಲೆ ತೆಗೆತೀನಿ ಅಂತ ಹೇಳಿದವರು ಯಾರು ಎಂದು ಪ್ರಶ್ನೆಗಳ ಸುರಿಮಳೆಗೈದರು.
ಬಿಜೆಪಿಯಿಂದ ಇಬ್ಬರು ಬಂದರೆ ಕಾಂಗ್ರೆಸ್ಸಿನಿಂದ ೧೦ ಜನ ಬರ್ತಿವಿ ಎಂದು ಕಾಂಗ್ರೆಸ್ಸಿನ ಹಿಂಬಾಲಕರು, ಪಟಾಲಂಗಳು ಚರ್ಚೆ ಮಾಡಿದ್ದು ನನಗೆ ಗೊತ್ತಿಲ್ಲವೆ? ಸರ್ಕಾರ ಇದ್ದದ್ದು, ಹೋಗಿದ್ದು ಮುಗಿದು ಹೋಗಿರುವ ಅಧ್ಯಾಯ ಎಂದರು.