ನವದೆಹಲಿ: ದೇಶಾದ್ಯಂತ ಕೋವಿಡ್–19 ಪ್ರಕರಣಗಳು ಏರಿಕೆಯಾಗುತ್ತಿದ್ದು, ಸೋಂಕು ನಿರ್ವಹಣೆಗೆ ಸಜ್ಜಾಗುವ ಜತೆಗೆ ಎಚ್ಚರಿಕೆ ವಹಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಸಲಹೆ ನೀಡಿದ್ದಾರೆ.
ನವದೆಹಲಿಯಲ್ಲಿಂದು ರಾಜ್ಯಗಳ ಆರೋಗ್ಯ ಸಚಿವರು ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಜತೆಗೆ ವರ್ಚುವಲ್ ಆಗಿ ಸಭೆ ನಡೆಸಿದ ಅವರು, ನೆಗಡಿ ಮೈ–ಕೈ ನೋವು ಮಾದರಿಯ ಅನಾರೋಗ್ಯ ಹಾಗೂ ಗಂಭೀರ ಉಸಿರಾಟದ ಸಮಸ್ಯೆ ಪ್ರಕರಣಗಳ ಮೇಲೆ ನಿಗಾ ಇರಿಸಿ ಎಮರ್ಜೆನ್ಸಿ ಹಾಟ್‌ಸ್ಪಾಟ್‌ಗಳನ್ನು ಗುರುತಿಸಬೇಕು. ಪರೀಕ್ಷೆ, ಲಸಿಕೆ ವಿತರಣೆಯನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದ್ದಾರೆ.