ಚಿಕ್ಕೋಡಿ: ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತಳ ಪತಿ ಬಾಳು ರೂಪನವರ ಅವರು ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಯೋಧ ಬಾಳು ಅರುಣಾಚಲ ಪ್ರದೇಶ ಗ್ಯಾಂಟುಕನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರೂಪಾಬಾಯಿ ಬಾಳು ರೂಪನವರ (31) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ.