ಬೆಳಗಾವಿ: ಕ್ರಿಕೆಟ್ ಜಗಳ ವಿಕೋಪಕ್ಕೆ ಹೋಗಿ ಎರಡು ಗುಂಪುಗಳ ನಡುವೆ ನಡೆದ ಗುಂಪು ಘರ್ಷಣೆಯಿಂದ ಶಹಾಪುರ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಬೆಳಗಾವಿಯ ಅಳ್ವಾನ್ನ ಆದರ್ಶ ಮರಾಠ ವಿದ್ಯಾಮಂದಿರ ಶಾಲೆ ಗ್ರೌಂಡ್ನಲ್ಲಿ ಗುರುವಾರ ಸಂಜೆ 4.30ಕ್ಕೆ ಅಪ್ರಾಪ್ತರು ಕ್ರಿಕೆಟ್ ಆಟ ಆಡಿದ್ದರು. ನಂತರ ಗೆದ್ದ ತಂಡದ ಮೇಲೆ ಮತ್ತೊಂದು ತಂಡದಿಂದ ಹಲ್ಲೆ ನಡೆದಿತ್ತು. ಘರ್ಷಣೆ ಮುಂದುವರಿದು ಸಂಜೆ 6 ಗಂಟೆಗೆ ಒಂದು ಯುವಕರ ಗುಂಪು ಕಲ್ಲು ತೂರಾಟ ಮಾಡಿತ್ತು. ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಕಲ್ಲು ತೂರದಂತೆ ಅಳ್ವಾನ್ ಗಲ್ಲಿ ನಿವಾಸಿಗಳು ಎಚ್ಚರಿಕೆ ನೀಡಿದ್ದರು. ಸಂಜೆ 6.15ಕ್ಕೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಸ್ಥಳಕ್ಕೆ ಆಗಮಿಸಿದರು. ಪೊಲೀಸ್ ಜೀಪ್ನಲ್ಲಿ ಮಹಿಳಾ ಅಧಿಕಾರಿ ಆಗಮಿಸಿದ ವೇಳೆ ಯುವಕರ ಗುಂಪೊಂದು ತಲ್ವಾರ್ ಎಸೆದು ಅಲ್ಲಿಂದ ಕಾಲ್ಕಿತ್ತಿದೆ. ಯುವಕರ ನಡುವಿನ ಗಲಾಟೆಯಲ್ಲಿ ಹಲವು ಮಂದಿಗೆ ಗಾಯಗಳಾಗಿವೆ. ಎರಡೂ ಕಡೆಯವರಿಗೆ ಗಾಯಗಳಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿ ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಹೆಚ್ಚಿನ ಪೊಲೀಸರನ್ನು ಭದ್ರತೆ ನಿಯೋಜಿಸಲಾಗಿದೆ.