ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕಾಗಿ ತಡರಾತ್ರಿ ಯವಕನನ್ನು ಗುಂಪೊಂದು ಹತ್ಯೆಗೈದಿರುವ ಘಟನೆ ನಗರದ ಗೋಕುಲ ರೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸುಶಾಂತ್ ಡಿ (27) ಹತ್ಯೆಗೊಳಗಾದ ಯುವಕ ಎಂದು ತಿಳಿದು ಬಂದಿದೆ. ಐವರ ಗುಂಪು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗೋಕುಲ ರೋಡ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ.