ತಮಿಳು ಚಲನಚಿತ್ರ ಹಿನ್ನೆಲೆ ಗಾಯಕಿ ಉಮಾ ರಮಣನ್ (69) ಅನಾರೋಗ್ಯದಿಂದ ಚೆನ್ನೈನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಉಮಾ ರಮಣನ್ ಅವರು 1980 ರಲ್ಲಿ ಬಿಡುಗಡೆಯಾದ ಶಾಡೋಸ್ ಚಿತ್ರದ ಹಾಡಿನ ಮೂಲಕ ಗಾಯಕಿಯಾಗಿ ತೆರೆಯ ಪ್ರಪಂಚಕ್ಕೆ ಪಾದಾರ್ಪಣೆ ಮಾಡಿದರು. ಈ ಚಿತ್ರಕ್ಕೆ ಇಳಯರಾಜ ಸಂಗೀತ ಸಂಯೋಜಿಸಿದ್ದಾರೆ. ಅಲ್ಲದೆ ಇವರು 100 ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ಶಾಸ್ತ್ರಿಯ ಸಂಗೀತ ಕಲಿತು ಗಾಯನದಲ್ಲಿ ಹೆಸರು ಮಾಡಿರುವ ಉಮಾ 35 ವರ್ಷಗಳಲ್ಲಿ 6000ಕ್ಕೂ ಹೆಚ್ಚು ಸಂಗೀತ ಕಛೇರಿಗಳನ್ನು ನಡೆಸಿಕೊಟ್ಟಿದ್ದಾರೆ.
ಕಳೆದ ಕೆಲ ತಿಂಗಳಿಂದ ಉಮಾ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.