ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ಕುರಿತು ಸುಪ್ರೀಂಕೋರ್ಟ್ ಸಂಸತ್ತಿಗೆ ನಿರ್ದೇಶನ ನೀಡುತ್ತದೆ ಎನ್ನುವುದರ ಬದಲು ಸಂಸತ್ತೇ ಪರಿಹಾರವನ್ನು ಕಂಡುಕೊಳ್ಳುವುದರಿಂದ ಹಾನಿ ಏನಿದೆ ಎಂದು ಶಿವಸೇನೆ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ `ಸಾಮ್ನಾ’ದಲ್ಲಿ ನೀಡಿರುವ ಸಲಹೆ ಚರ್ಚೆಗೆ ಗ್ರಾಸವಾಗಿದೆ.
ಶಾಸಕಾಂಗ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಇರುವುದರಿಂದ ಉಭಯ ರಾಜ್ಯಗಳ ಗಡಿ ವಿವಾದ ನ್ಯಾಯಾಲಯದ ಮೆಟ್ಟಿಲೇರಿದೆ. ಬೆಳಗಾವಿ ಮತ್ತು ಸುತ್ತ-ಮುತ್ತಲಿನ ಪ್ರದೇಶಗಳನ್ನು ಮರಾಠಿ ಭಾಷೆ ಮಾತನಾಡುವ ಜನರ ಇಚ್ಛೆಗೆ ವಿರುದ್ಧವಾಗಿ ಕರ್ನಾಟಕಕ್ಕೆ ಒತ್ತಾಯ ಪೂರ್ವಕವಾಗಿ ಸೇರಿಸಲಾಗಿದೆ. ಆದರೆ, ಅಲ್ಲಿರುವ ಮರಾಠಿಗರ ಹೋರಾಟ ಹತ್ತಿಕ್ಕಲು ಯಾರಿಗೂ ಸಾಧ್ಯವಿಲ್ಲ ಎಂದು ಅವರು ಲೇಖನದಲ್ಲಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಲಕ್ಷ್ಯ ತೋರಿದ್ದಾರೆ. ಆದರೆ, ಯುಕ್ರೇನ್-ರಷ್ಯಾ ನಡುವೆ ನಡೆಯುತ್ತಿರುವ ಯುದ್ಧ ನಿಲ್ಲಿಸಲು ಅವರು ಮಧ್ಯಸ್ಥಿಕೆ ವಹಿಸುತ್ತಾರೆ. ಇದು ಉತ್ತಮ ರಾಜಕಾರಣಿಯ ಲಕ್ಷಣವಲ್ಲ ಎಂದು ಹರಿಹಾಯ್ದಿದ್ದಾರೆ.