ಗಡ್ಕರಿಗೆ ಬೆದರಿಕೆ ಹಾಕಿದ್ದವನಿಗೆ ದಾವೂದ್ , ಪಿಎಫೈ ಲಿಂಕ್

ನಿತಿನ್ ಗಡ್ಕರಿ
Advertisement

ಬೆಳಗಾವಿ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿ ಹಿಂಡಲಗಾ ಕಾರಾಗೃಹದಿಂದ ಫೋನ್ ನಲ್ಲಿ ಬೆದರಿಕೆ ಹಾಕಿದ್ದ ಕೈದಿ ಜಯೇಶ್ ಪೂಜಾರಿ ಅಲಿಯಾಸ್ ಕಾಂತಾಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ, ಲಷ್ಕರ್ ಎ ತೊಯ್ದಾ ಹಾಗೂ ನಿಷೇಧಿತ ಪಿಎಫ್ ಐ ಜತೆ ಸಂಪರ್ಕ ಹೊಂದಿರುವ ಬಗ್ಗೆ ಮಾಹಿತಿ ಬಂದಿದ್ದಾಗಿ ನಾಗಪುರ ಪೊಲೀಸ್ ಆಯುಕ್ತ ಅಮಿತೇಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಜಯೇಶನ ಬ್ರೇನ್ ವಾಶ್ ಮಾಡಿದ್ದು, ಅವನೀಗ ತೀವ್ರವಾದಿ ಆಗಿದ್ದಾನೆ. ಜೈಲಿನಲ್ಲಿ ಇತರ ಡಿ-ಗ್ಯಾಂಗ್ ಜೊತೆ ಸೇರಿ ಸಂಚು ರೂಪಿಸುತ್ತಿದ್ದ ಬಗ್ಗೆ ಸ್ವತಃ ಅವನೇ ತಿಳಿಸಿರುವುದಾಗಿ ಹೇಳಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಜಯೇಶ್ ಪೂಜಾರ ಅವರನ್ನು ಜೈಲಿನಲ್ಲಿ ಚೆನ್ನಾಗಿ ನೋಡಿಕೊಳ್ಳಲಾಗಿದೆ. ಬೆಳಗಾವಿ ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿ ಅವರಿಗೆ ಎರಡು ಬಾರಿ ಬೆದರಿಕೆ ಹಾಕಿದ್ದ. ಹೀಗಾಗಿ ನಾಗ್ಪುರ ನ್ಯಾಯಾಲಯ ಅವನ ವಿರುದ್ಧ ಯುಎಪಿಎ ಕಾಯ್ದೆಯಡಿ ಕ್ರಮ ಕೈಗೊಳ್ಳಲಿದೆ.
ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಪೊಲೀಸರು ರಾತ್ರಿ ಬೆಳಗಾವಿ ಹಿಂಡಲಗಾ ಜೈಲಿಗೆ ಆಗಮಿಸಿ ಜಯೇಶನನ್ನು ವಶಕ್ಕೆ ಪಡೆದಿದ್ದಾರೆ.ಸಿಕ್ಕಿರುವ ಮಾಹಿತಿ ಪ್ರಕಾರ, ಜಯೇಶ್ ಪೂಜಾರಿ ಪಿಎಫ್‌ಐ, ದಾವೂದ್ ಇಬ್ರಾಹಿಂ ಮತ್ತು ಲಷ್ಕರ್-ಎ ತೊಯ್ದಾ ಜೊತೆ ಸಂಪರ್ಕ ಹೊಂದಿದ್ದಾನೆ. ಸದ್ಯ ನಾಗ್ಪುರ ಪೊಲೀಸರು ವಶದಲ್ಲಿದ್ದು, ಕೂಲಂಕುಶವಾಗಿ ತನಿಖೆ ನಡೆಸುತ್ತಿದ್ದಾರೆ.
ನಾಗ್ಪುರ ಪೊಲೀಸರು ಜಯೇಶ್ ಪೂಜಾರಿ ಮೇಲೆ ಯುಪಿಎ ಕಾಯ್ದೆಯಡಿ ಕ್ರಮಕ್ಕೆ ತನಿಖೆ ನಡೆಯುತ್ತಿದ್ದಾರೆ