ಗಣೇಶೋತ್ಸವಕ್ಕೆ ಬಿಗಿ ಭದ್ರತೆ ಎಲ್ಲ ಕಡೆ ಹಾರಾಡುತ್ತಿವೆ ಡ್ರೋಣ್ ಕ್ಯಾಮರಾ; ಎಡಿಜಿಪಿ ಅಲೋಕಕುಮಾರ್

Advertisement

ಹುಬ್ಬಳ್ಳಿ : ಹುಬ್ಬಳ್ಳಿ,, ಶಿವಮೊಗ್ಗದ, ಬೆಳಗಾವಿ ಸೇರಿದಂತೆ ರಾಜ್ಯದ ಕೆಲ ನಗರಗಳಲ್ಲಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕಕುಮಾರ್ ಹೇಳಿದರು.
ಹುಬ್ಬಳ್ಳಿ ಕಿತ್ತೂರು ಚನ್ನಮ್ಮ ವೃತ್ತದ ಹತ್ತಿರದ ಪಾಲಿಕೆ ಜಾಗೆ ( ಈದ್ಗಸ ಇರುವ ಸ್ಥಳ) ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದರು.
ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಇರುವ ಈದ್ಗಾ ಮೈದಾನದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹದ್ದಿನ ಕಣ್ಷಿಡಲಾಗಿದೆ, ಮೆರವಣಿಗೆ ಸಾಗುವ ಮಾರ್ಗದಲ್ಲಿ ಸಾಕಷ್ಟು ಭದ್ರತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಡ್ರೋಣ್ ಬಳಕೆ
ಎಲ್ಲ ಕಡೆಗೂ ಸಿ.ಸಿ.ಟಿವಿ ಕ್ಯಾಮರಾ ಅಳವಡಿಸಲಾಗಿದೆ. ಡ್ರೋಣ್ ಕ್ಯಾ.ಮರಾಗಳನ್ನು ಹೆಚ್ಚು ನಿಯೋಜನೆ ಮಾಡಲಾಗಿದೆ. ಯಾವುದೇ ರೀತಿ ಶಾಂತಿ ಭಂಗಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಲಾಗಿದೆ ಎಂದರು.

ಕಿಡಿಗೇಡಿಗಳ ಬಂಧನ
ಹಬ್ಬ, ಅಚರಣೆ ಸಂದರ್ಭದಲ್ಲಿ ಕಿಡಿಗೇಡಿತನ ಮಾಡುವ ಸಮಾಜ ಘಾತುಕ ಶಕ್ತಿಗಳ ಮೇಲೆ ನಿಗಾ ವಹಿಸಲಾಗಿದೆ. ರೌಡಿಶೀಟರ್ ಗಳಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಕೆಲವರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.

ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡುತ್ತೊ ಬಿಡುತ್ತೊ ಅದು ಪಾಲಿಕೆಗೆ ಬಿಟ್ಟ ವಿಚಾರ. ನಮ್ಮ ಇಲಾಖೆಯಿಂದ ಏನೇನು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೊ ಅದನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.
ಮಹಾನಗರ ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲ ಬ್ಯಾಕೋಡ ಹಾಗೂ ಇತರ ಪೊಲೀಸ್ ಅಧಿಕಾರಿಗಳಿದ್ದರು.